ಗವಿಸಿದ್ದಪ್ಪ ಪ್ರಕರಣ ಎಸ್ ಐ ಟಿ ತನಿಖೆಗೆ ಒಳಪಡಿಸಲು ಮನವಿ
ಬೆಂಗಳೂರು: ಕೊಪ್ಪಳದಲ್ಲಿ ಮತಾಂಧರಿಂದ ಹತ್ಯೆಗೀಡಾದ ವಾಲ್ಮೀಕಿ ಸಮುದಾಯದ ಗವಿಸಿದ್ದಪ್ಪ ಅವರ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಇಂದು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಶಾಸಕರ ನಿಯೋಗವು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ. ಶ್ರೀರಾಮುಲು, ಜಿ. ಜನಾರ್ಧನ್ ರೆಡ್ಡಿ, ಬಿಜೆಪಿ ಮತ್ತು ಜೆಡಿಎಸ್‌ನ ಶಾಸಕರು, ಪರಿಷತ್ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.