LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಮಳಿಗೆಗಳನ್ನು ತೆರವುಗೊಳಿಸಲು ಮನವಿ

ನಾಯಕನಹಟ್ಟಿ : ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ  ವಾಣಿಜ್ಯ ಮಳಿಗೆಗಳು (ರಾಜ್ಯ ಹೆದ್ದಾರಿ-45) ಚಳ್ಳಕೆರೆ-ಅರಬಾವಿ ರಸ್ತೆ ಪಕ್ಕದಲ್ಲಿ ನಿರ್ಮಾಣವಾಗಿದ್ದು, ಈ ಮಳಿಗೆಗಳು ರಸ್ತೆ ಮಾರ್ಜಿನ್ ಬಿಡದೆ ಅಕ್ರಮವಾಗಿ ನಿರ್ಮಿಸಿದ್ದು, ಕಳಪೆ ಗುಣಮಟ್ಟದಲ್ಲಿ ನಿರ್ಮಾಣವಾಗಿದ್ದು, ಈ ಕೂಡಲೇ ಮಳಿಗೆಗಳನ್ನು ತೆರವುಗೊಳಿಸಬೇಕು ಹಾಗೂ ಈ ಮಳಿಗೆಗಳಿಗೆ ಸಂಬಂಧಪಟ್ಟ ದಾಖಲೆಗಳಾದ ಡಿ.ಪಿ.ಆರ್ ಹಾಗೂ ಎಸ್ಟಿಮೇಷನ್ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ)ದ ವತಿಯಿಂದ ಉಗ್ರವಾದ ಹೋರಾಟ ಮತ್ತು ಧರಣಿ ಸತ್ಯಗ್ರಹವನ್ನು ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

 

ಈ ಸಂದರ್ಭದಲ್ಲಿ  ಚಳ್ಳಕೆರೆ ತಾಲ್ಲೂಕು ಅಧ್ಯಕ್ಷರಾದ ಮಂಜುನಾಥ, ಗೌರವಾಧ್ಯಕ್ಷರಾದ ಬೋಜರಾಜ, ಮತ್ತು ನಾಯಕನಹಟ್ಟಿ ಹೋಬಳಿ ಘಟಕ ಅಧ್ಯಕ್ಷರಾದ ಬೋರಯ್ಯ, ಉಸ್ತುವಾರಿ ಅಧ್ಯಕ್ಷರಾದ ಓಂಕಾರಪ್ಪ, ಪ್ರಧಾನ ಕಾರ್ಯದರ್ಶಿಯಾದ ಸುರೇಶ್, ಉಪಾಧ್ಯಕ್ಷರಾದ ಕಾಟಮಲಿಂಗಯ್ಯ, ನಗರ ಘಟಕ ಅಧ್ಯಕ್ಷರಾದ ಉಮೇಶ್, ನಗರ ಉಪಾಧ್ಯಕ್ಷರಾದ ರಮೇಶ್, ಆಟೋ ಘಟಕ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಉಪಾಧ್ಯಕ್ಷರಾದ ಮಂಜುನಾಥ, ಶಿವರಾಜ್, ಇನ್ನೂ ಮುಂತಾದ ಕರವೇ ಪದಾಧಿಕಾರಿಗಳ ಮುಖಾಂತರ  ಚಳ್ಳಕೆರೆ ಕೃಷಿ ಉತ್ಪನ್ನ  ಮಾರುಕಟ್ಟೆ ಅಧಿಕಾರಿ ಸುರೇಶ್‌ರವರಿಗೆ  ಮನವಿಯನ್ನು ಸಲ್ಲಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ