LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಜನತಂತ್ರ ಉಳಿಸಿ ಆಂದೋಲನ ಸಂಘಟನೆಯಿಂದ ನಿವೃತ್ತ ತಹಸೀಲ್ದಾರ್ ಮಲ್ಲಿಕಾರ್ಜುನ್ ಸ್ಪರ್ಧೆ

ಚಿತ್ರದುರ್ಗ : ಆಗ್ನೇಯ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಬಾರಿ  ಜನಪರ ಸಂಘಟನೆಗಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ತಹಶೀಲ್ದಾರ್ ಹಿರೇಹಳ್ಳಿ ಎಂ ಮಲ್ಲಿಕಾರ್ಜುನ್ ಅವರು ಸ್ಪರ್ದಿಸಲು ಸಜ್ಜಾಗಿದ್ದಾರೆ

ಜನತಂತ್ರ ಉಳಿಸಿ ಆಂದೋಲನ ಕರ್ನಾಟಕ ಸಂಘಟನೆಯ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಯಾರಿ ನಡೆಸಿದ್ದಾರೆ. ಸಂಬಂಧ ಕಳೆದ ಆರು ತಿಂಗಳಿನಿಂದ ಅವರು ಕ್ಷೇತ್ರದಲ್ಲಿ ಮತದಾರರ ಭೇಟಿಯಾಗಿ ಮನವೊಲಿಸುತ್ತಿದ್ದಾರೆ

ಚಿತ್ರದುರ್ಗ, ಚಳ್ಳಕೆರೆ ಸೇರಿದಂತೆ ವಿವಿಧ ಕಡೆ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿರುವ ಹಿರೇಹಳ್ಳಿ ಮಲ್ಲಿಕಾರ್ಜುನ್ ಅವರು, ನಿವೃತ್ತಿ ಬಳಿಕ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಜನತಂತ್ರ ಉಳಿಸಿ ಆಂದೋಲನ ಕರ್ನಾಟಕ ಸಂಘಟನೆಯಲ್ಲಿ ಗುರ್ತಿಸಿ ಕೊಂಡು ಮೂಲಕ ಪ್ರಜಾಪ್ರಭುತ್ವ, ಸಂವಿಧಾನ ಬಗ್ಗೆ ಜನ ಜಾಗೃತಿ ಮೂಡಿಸಲು ಅನೇಕ ಬಗೆಯ ಕಾರ್ಯಕ್ರಮ ರೂಪಿಸಿದ್ದಾರೆ.

ಮತ ಕಳುವು ಮತ್ತು ಮತ ಖರೀದಿ ವಿರುದ್ದ ದ್ವನಿ ಎತ್ತಿ ಅಳುವ ಸರ್ಕಾರ ಅನುರಿಸುತ್ತಿರುವ ಜನ ವಿರೋಧಿ ನೀತಿ ಮತ್ತು ಬಂಡವಾಳ ಶಾಹಿಗಳ ವಿರುದ್ಧ ದೊಡ್ಡ ಮಟ್ಟದಲ್ಲಿ ಚಳುವಳಿ ನಡೆಸುತ್ತಿರುವ ಜನತಂತ್ರ ಉಳಿಸಿ ಆಂದೋಲನ ಸಂಘಟನೆ ಬಾರಿಯ ಚುನಾವಣೆಗೆ ಸ್ಪರ್ಧೆ ಮಾಡಲು ಯೋಚಿಸಿ

 ಅಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಹಿರೇಹಳ್ಳಿ ಮಲ್ಲಿಕಾರ್ಜುನ್ ಅವರನ್ನೇ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಹಿನ್ನಲೆಯಲ್ಲಿ ಅವರು ಈಗಾಗಲೇ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ದಲಿತ, ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಉನ್ನತಿಗಾಗಿ ಹೋರಾಟ ಮಾಡಿಕೊಡು ಬಂದಿದ್ದು, ಚುನಾವಣೆಯಲ್ಲಿ ಎಲ್ಲಾ ಜನಪರ ಸಂಘಟನೆಗಳ ಬೆಂಬಲ ಸಿಗಲಿದೆ ಎಂದು ಅಭ್ಯರ್ಥಿ ಹಿರೇಹಳ್ಳಿ ಎಂ ಮಲ್ಲಿಕಾರ್ಜುನ್ ತಿಳಿಸಿದ್ದಾರೆ

 ಮತದಾರರು ಮತ್ತು ಜನಪರ ಸಂಘಟನೆಗಳ ಎಲ್ಲಾ ಮುಖಂಡರುಗಳ ಸಭೆ ಕರೆದು ಚರ್ಚಿಸಿ ಚುನಾವಣೆ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ