LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೀದರ್ ನಲ್ಲಿಎದ್ದೇಳು ಕನ್ನಡಿಗ, ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ

ಬೀದರ್ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬೀದರ್ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ನೋವಾದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿ ನಗರದ ಅಂಬೇಡ್ಕರ್ ವೃತ್ತ, ಗವಾನ್ ಚೌಕ್, ಚೌಬಾರ,ಬಸವೇಶ್ವರ ವೃತ್ತ,ಮೂಲಕ ಪಾದಯಾತ್ರೆ ಮಾಡಿ ಅಭಿಯಾನದ ಕುರಿತು ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು.

 

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರೈತ ಘಟಕದ ಅಧ್ಯಕ್ಷ ಜೊಗನಹಳ್ಳಿ ಗುರುಮೂರ್ತಿ  ಅವರು  ಇತ್ತೀಚಿನ ದಿನಗಳಲ್ಲಿ ಕನ್ನಡಿಗರು ಅನುಭವಿಸುತ್ತಿರುವ ನೋವುಗಳಿಗೆ,ಕಷ್ಟ ಕಾರ್ಪಣ್ಯಗಳಿಗೆ ನಮ್ಮನ್ನು ಆಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ನೇರವಾಗಿ ಕಾರಣ.ಅವರವರ ಸ್ವಾರ್ಥದ ಮತ್ತು ಕುಟುಂಬದ ರಾಜಕಾರಣದಲ್ಲಿ ರಾಜ್ಯದ ಮತದಾರರನ್ನು ಮೂರ್ಖರನ್ನಾಗಿ ಮಾಡಿ ಜನರನ್ನು ವಂಚಿಸುತ್ತಿದ್ದಾರೆ ಜನಪರವಾದ ಆಡಳಿತ ನಡೆಸಬೇಕಾದ ಪಕ್ಷಗಳು ಜಾತಿ ರಾಜಕಾರಣ, ಹಣಬಲದ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ ಹಾಗಾಗಿ ನಮ್ಮ ಪಕ್ಷವು ಕನ್ನಡ ನಾಡಿನ ನೆಲ,ಜಲ,ಗಡಿ ಭಾಷೆಯ ಉಳಿವಿಗಾಗಿ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡುವಿಕೆಗಾಗಿ ಒತ್ತಾಯಿಸಿ ಮುಂದಿನ ನವಂಬರ್ ತಿಂಗಳಲ್ಲಿ ಒಂದು ದೊಡ್ಡ ಸಮಾವೇಶ ಆಯೋಜಿಸಲಾಗುತ್ತಿದ್ದು ಸಮಸ್ತ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.



ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ  ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ  ಅವರು ಮಾತನಾಡಿ ರಾಜ್ಯದಲ್ಲಿ ರೈತರಿಗೆ,ಮಹಿಳೆಯರಿಗೆ,ವಿದ್ಯಾರ್ಥಿಗಳಿಗೆ,ಕೃಷಿ ಕಾರ್ಮಿಕರಿಗೆ ಉತ್ತಮವಾದ ಜೀವನ ನಿರ್ವಹಣೆಗೆ ಅನುನಕೂಲದ ವಾತಾವರಣ ನಿರ್ಮಾಣವಾಗಿದೆ ಈ ಎಲ್ಲಾ ಅವ್ಯವಸ್ಥೆಗಳನ್ನು ವಿರೋಧಿಸಿ ಪ್ರತಿಯೊಬ್ಬರು ಉತ್ತಮವಾದ ಜನ ಜೀವನ ಮಾಡುವಂತೆ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಜನರಿಗೆ ತಲುಪಿಸಿ ಕನ್ನಡಿಗರನ್ನು ಜಾಗೃತಿ ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದು ಇದಕ್ಕೆ ಕನ್ನಡಪರ,ರೈತಪರ,ಪ್ರಗತಿಪರ ಸಂಘಟನೆಗಳ ಮುಖಂಡರು,ನಾಯಕರು ಬೆಂಬಲಿಸಬೇಕೆಂದು ವಿನಂತಿಸಿದರು.

 

ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಆನಂದ್,ಪಕ್ಷದ ಮುಖಂಡರಾದ ಬಿ ಕೆ ಪ್ರಸನ್ನ, ತುಕಾರಾಮ ಗೋರೆ,ರಾಜ್ಯ ರೈತ ಘಟಕದ ಕಾರ್ಯದರ್ಶಿ ಶಿವರಾಜ್ ಕಪಗಲ್,ಜಿಲ್ಲಾಧ್ಯಕ್ಷರಾದ ಹನುಮಂತ ಮಟ್ಟೆ,ಪ್ರಧಾನ ಕಾರ್ಯದರ್ಶಿ ಭಜರಂಗ ಪವಾರ,ಶಿವರಾಜ್ ಶ್ರೀಮಂಗಲ,ರಾಘವೇಂದ್ರ, ತಾನಾಜಿ ಜಾದವ್,ವಿಠ್ಠಲ ರಾವ್,ಸಂಗಮೇಶ, ಸೋಮನಾಥ್ ಶಾಸ್ತ್ರಿ,ಜಯಸೂರ್ಯ, ಮಲ್ಲಿಕಾರ್ಜುನ,ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಅಜ್ಜಮ್ಮ ರೆಡ್ಡಿ, ಶ್ವೇತಾ ಸ್ವಾಮಿ,ಸೇರಿದಂತೆ ಅನೇಕರು ಭಾಗವಹಿಸಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST