ದಾವಣಗೆರೆ: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮತ್ತು ವಿದ್ಯಾರ್ಥಿ ಮಾರ್ಗದರ್ಶನದಲ್ಲಿ ಸಲ್ಲಿಸಿದ ಮಹತ್ವದ ಕೊಡುಗೆಯನ್ನು ಗುರುತಿಸಿ, ದಾವಣಗೆರೆಯ ಡಾ. ವೆಂಕಟೇಶ್ ಬಾಬು ಎಸ್ ಅವರಿಗೆ ಪ್ರತಿಷ್ಠಿತ “ಸರಸ್ವತಿ ಕನ್ನಡ ರತ್ನ ಪ್ರಶಸ್ತಿ – 2024” ಪ್ರದಾನ ಮಾಡಲಾಗಿದೆ.
ಶ್ರೀಮತಿ ಸರಸ್ವತಿ ದಾಸಪ್ಪ ಶೈಕ್ಷಣಿಕ ಪ್ರತಿಷ್ಠಾನ (ಸಾಲಿಗ್ರಾಮ), ದಾವಣಗೆರೆ ಇವರ ವತಿಯಿಂದ ಆಯೋಜಿಸಲಾದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಲಹೆ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವ್ಯಕ್ತಿತ್ವ ವಿಕಸನಕ್ಕೆ ನೀಡಿದ ಮಾರ್ಗದರ್ಶನ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಪರಿಗಣಿಸಿ ಈ ಗೌರವಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಲಿಗ್ರಾಮ ಗಣೇಶ ಶೆಣೈ ವಾಸುದೇವ ರಾಯ್ಕರ್ ಹಾಗೂ ಇತರ ಗಣ್ಯರು, ಶಿಕ್ಷಣ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅತಿಥಿಗಳು, ಡಾ. ವೆಂಕಟೇಶ್ ಬಾಬು ಎಸ್ ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ನಿರಂತರವಾಗಿ ನೀಡುತ್ತಿರುವ ಸೇವೆಯನ್ನು ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಪ್ರಶಸ್ತಿ ಫಲಕ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಡಾ. ವೆಂಕಟೇಶ್ ಬಾಬು ಎಸ್ ಅವರು ತಮ್ಮ ಸಾಧನೆಗೆ ಸಹಕರಿಸಿದ ಗುರುಗಳು, ಕುಟುಂಬದ ಸದಸ್ಯರು ಹಾಗೂ ಸಂಸ್ಥೆಯ ಸಹೋದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಈ ಗೌರವವು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಪ್ರೇರಣೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವೆ ಮಾಡಲು ಉತ್ತೇಜನ ನೀಡುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು.