ನಾಯಕನಹಟ್ಟಿ : ಶ್ರೀ ಮಾದರ ಚನ್ನಯ್ಯ ಸೇವಾ ಸಮಿತಿಯ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಮುದ್ದಾಪುರ ಪರುಷುರಾಂರವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ.
ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಸಮುದಾಯದ ಅಭಿವೃದ್ಧಿ ಮಾದಿಗ ಸಮುದಾಯದ ಕಾಲೋನಿಗಳಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಿಸುವುದು, ಸಾಮಾಜಿಕ ಮತ್ತು ರಾಜಕೀಯ, ಆರ್ಥಿಕ ಅಭಿವೃದ್ಧಿ ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಿ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವ ಹುದ್ದೇಶದಿಂದ ಮಾದರ ಚನ್ನಯ್ಯ ಸೇವಾ ಸಮಿತಿಯನ್ನು ಅನುಸ್ಠಾನಕ್ಕೆ ತರಲಾಗಿದೆ ಎಂದುಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ತಿಳಿಸಿದ್ದಾರೆ.