LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯಿಂದ ಸೇವಾ ಪಾಕ್ಷಿಕ ಕಾರ್ಯಾಗಾರ

ಬಳ್ಳಾರಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆ. ೧೭ರಿಂದ ಅ. ೦೨ ವರೆಗೆ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬೆಳಿಗ್ಗೆ ಮಂಡಲದ ಸೇವಾಪಾಕ್ಷಿಕ ಕಾರ್ಯಾಗಾರದಲ್ಲಿ ಸ್ಥಳೀಯ ಬಿಜೆಪಿ ನಾಯಕರು, ಮುಖಂಡರು ಭಾಗವಹಿಸಿದ್ದರು.

 

ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ ಅವರು ಈ ಸೇವಾ ಪಾಕ್ಷಿಕ ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಅವರು ಕಳೆದ 11 ವರ್ಷದಲ್ಲಿ ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಭಾರತೀಯ ಜನತಾ ಪಾರ್ಟಿಯ ಜನಪರ ಯೋಜನೆಗಳನ್ನು ಮೆಲುಕು ಹಾಕಿದ ಸೋಮಶೇಖರರೆಡ್ಡಿ ಅವರು, ಪಕ್ಷದ ತತ್ವ ನಿಷ್ಠೆಗೆ ಅನುಗುಣವಾಗಿ ಕಾರ್ಯಕರ್ತರು ಶ್ರಮಿಸಬೇಕೆಂದರು.



ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ, ಮಂಡಲ ಅಧ್ಯಕ್ಷ ಜಿ. ವೆಂಕಟರಮಣ, ಸೇವಾ ಪಾಕ್ಷಿಕ ಸಂಚಾಲಕರು ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಡಾ.ಅರುಣಾ ಕಾಮಿನೇನಿ,  ಮಹಾನಗರ ಪಾಲಿಕೆ ಸದಸ್ಯರು ಹಾಗೂ ಸೇವಾ ಪಾಕ್ಷಿಕ ಸಹ ಸಂಚಾಲಕರಾದ ಅಶೋಕ್ ಕುಮಾರ್, ಪಕ್ಷದ ಹಿರಿಯ ಮುಖಂಡರಾದ ಸಾಧನಾ ಹಿರೇಮಠ, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀನಿವಾಸ್ ಮೋತ್ಕರ್, ಹನುಮಂತಪ್ಪ, ಎಸ್.ಮಲ್ಲನಗೌಡ, ಗುಡಿಗಂಟಿ ಹನುಮಂತ, ವೇಮಣ್ಣ, ಮುಖಂಡರಾದ ವೆಂಕಟರಮಣ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅಮರ್ ನಾಥ, ಓಂ ಪ್ರಕಾಶ್, ಮುಖಂಡರುಗಳಾದ ಕೇಶವ, ರಘು, ಸುಧಾಕರ್, ನಾಗರಾಜ್, ಶಿವು,  ನಗರ ಮಂಡಲ ಪದಾಧಿಕಾರಿಗಳು, ಎಲ್ಲಾ ಮೋರ್ಚಾ ಪದಾಧಿಕಾರಿಗಳು, ಮಹಾ ಶಕ್ತಿ ಕೇಂದ್ರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST