LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಸಿದ್ದರಾಮಯ್ಯ 17ನೇ ಬಜೆಟ್ ಮಂಡಿಸುವುದು ಡೌಟು : ಬಿ ಶ್ರೀರಾಮುಲು

ಬಳ್ಳಾರಿ : ರಾಜ್ಯ ಸರ್ಕಾರದ ವಾಸ್ತವ ಸ್ಥಿತಿಗತಿಗಳನ್ನು ಗಮನಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೭ನೇ ಬಜೆಟ್ ಮಂಡಿಸುವುದು ಅನುಮಾನ ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಹೇಳಿದರು.

 

ನಗರದ ತಮ್ಮ ಗೃಹ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ, ಇದನ್ನು ಸುಧಾರಿಸಲು ಜಾತಿ ಜನಗಣತಿಯನ್ನು ನಡೆಸಿ ಸರ್ಕಾರಕ್ಕೆ ಹೊರೆಯಾಗಿರುವ 16 ಲಕ್ಷ  ಬಿಪಿಎಲ್ ಕಾರ್ಡ್ ರದ್ದುಪಡಿಸುವುದು  ಮತ್ತು ಉಳ್ಳವರ ಕುಟುಂಬಗಳನ್ನು ಗ್ಯಾರಂಟಿ ಯೋಜನೆಗಳಿಂದ ಹೊರಗಿಡುವ ಹುನ್ನಾರ ನಡೆಯುತ್ತಿದೆ ಎಂದರು.

 

ಜಾತಿ ಜನಗಣತಿ ವಿಷಯವಾಗಿ ಸರ್ಕಾರ ಪದೇ ಪದೇ ಹಣವನ್ನು ಪೋಲು ಮಾಡುತ್ತಿದೆ, 10 ವರ್ಷಗಳ ಕಾಲ ಕಾಂತರಾಜ್ ವರದಿಯನ್ನು ತಯಾರಿಸಲು 165 ಕೋಟಿ ರೂಪಾಯಿ ಖರ್ಚು ಮಾಡಿದೆ. ಸದಾಶಿವ ಆಯೋಗ ವರದಿಯಂತೆ ಜಾತಿ ಜನಗಣತಿಯನ್ನು ನಡೆಸಲು ಈಗ 120 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ತೆಗೆದಿರಿಸಲಾಗಿದೆ. ಇದು ರಾಜ್ಯ ಹಣಕಾಸು ಇಲಾಖೆಗೆ ಹೊರೆಯಾಗಲಿದೆ. ಇದು ಕಾಂಗ್ರೆಸ್ ಸರ್ಕಾರದ ಹಣ ಲಪಟಾಯಿಸುವ ದುರುದ್ದೇಶವಾಗಿದೆ ಎಂದು ಟೀಕಿಸಿದರು.



1.75 ಲಕ್ಷ ಜನ ಈ ಗಣತಿಯಲ್ಲಿ ಪಾಲ್ಗೊಳ್ಳಲಿದ್ದು, ಶಿಕ್ಷಕರು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತರು ತಮ್ಮ ಕೆಲಸದ ಹೊರೆ ಮಧ್ಯೆ ಈ ಸಮೀಕ್ಷೆಗೆ ಬಳಸಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ೩೨೫ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದ್ದಾರೆ. 120 ರಿಂದ 150 ಕೋಟಿ ರೂಪಾಯಿಗಳನ್ನು ಲಪಟಾಯಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಕಾರಣಕ್ಕಾಗಿ ಸಿದ್ದರಾಮಯ್ಯನವರು ತಮ್ಮ ಆಪ್ತರಾದ ಮಧುಸೂದನ್ ನಾಯಕ್ ಅವರನ್ನು ಸಮಿತಿಯ ಉಸ್ತುವಾರಿಯನ್ನಾಗಿ ನೇಮಕ ಮಾಡಿಕೊಂಡಿದ್ದಾರೆ ಎಂದರು.

 

ಬಿಜೆಪಿ ಎಸ್ ಟಿ ಮೋರ್ಚಾದ ರಾಜ್ಯ ಮುಖಂಡರಾದ ಬಿ.ಓಬಳೇಸ್, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀನಿವಾಸ್ ಮೋತ್ಕರ್, ಕೆ ಹನುಮಂತಪ್ಪ, ಗುಡಿಗಂಟಿ ಹನುಮಂತಪ್ಪ, ಬಿಜೆಪಿ ಮುಖಂಡರಾದ ವೆಂಕಟರಾಮರೆಡ್ಡಿ, ತಿಮ್ಮಪ್ಪ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ