LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಎಸ್ಐಆರ್: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

ಬಳ್ಳಾರಿ : ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಸಂಪೂರ್ಣ ಪಾರದರ್ಶಕತೆಯಿಂದ ಕೂಡಿದ್ದು, ಇದರಲ್ಲಿ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಸಹಭಾಗಿತ್ವವೂ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಹೇಳಿದರು.

ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಕಾರಾತ್ಮಕವಾಗಿ ಸಹಕರಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಗಳ ವಿತರಣೆಯ ಕಾರ್ಯವು ಪ್ರಗತಿಯಲ್ಲಿದ್ದು, ಈಗಾಗಲೇ ಶೇ.97 ಷ್ಟು ಪ್ರಗತಿ ಸಾಧಿಸಲಾಗಿದೆ. ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟರುಗಳು ನಮಗೆ ಸಂಪೂರ್ಣ ಮಾಹಿತಿ ನೀಡಿ ಸಹಕರಿಸಬೇಕಿದೆ ಎಂದು ಹೇಳಿದರು.

ಗಣತಿ ನಮೂನೆಗಳನ್ನು ಭರ್ತಿ ಮಾಡುವಾಗ ಸಾರ್ವಜನಿಕರಲ್ಲಿ ಉಂಟಾಗುವ ಗೊಂದಲಗಳ ತಪ್ಪಿಸಲು ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ಫಾರ್ಮ್ಗಳಲ್ಲಿನ ಮೊದಲ ಭಾಗ ಹಾಗೂ ಎರಡನೇ ಭಾಗಗಳನ್ನು ಭರ್ತಿ ಮಾಡುವಾಗ ಆಗುವ ಸಾಮಾನ್ಯ ತಪ್ಪುಗಳನ್ನು ತಪ್ಪಿಸಲು ಬಿಎಲ್ ಮತ್ತು ಬಿಎಲ್ಎಗಳಿಗೆ ವಿಶೇಷ ತರಬೇತಿ ನೀಡಲಾಗಿದೆ. ಜಿಲ್ಲೆಯಲ್ಲಿ ಅತ್ಯಂತ ಪಾರದರ್ಶಕ ಹಾಗೂ ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಲು ಎಲ್ಲಾ ರಾಜಕೀಯ ಪಕ್ಷಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಅಧಿಕಾರಿ- ಸಿಬ್ಬಂದಿ ಹಾಗೂ ಜಿಲ್ಲೆಯ ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ