LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ಅತಿ ಅವಶ್ಯಕ

ಜಿ.ಆರ್ ಇನ್‌ಫ್ರಾ ಸೋಷಿಯಲ್ ಎಲ್‌ಫೇರ್ ಟ್ರಸ್ಟ್ ವತಿಯಿಂದ ಸರ್ಕಾರಿ ಪ್ರೌಢ ಶಾಲೆಗಳಿಗೆ 18.35 ಲಕ್ಷ ರೂ.ಗಳು ಪ್ರೊಜೆಕ್ಟರ್ ಕೊಡುಗೆ

5 ಸರಕಾರಿ ಪ್ರೌಢಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ

ಒಂದು ಸ್ಮಾರ್ಟ್ ಕ್ಲಾಸ್: ಮತ್ತೊಂದು ಡಿಜಿಟಲ್ ಲೈಬ್ರರಿ

ಗ್ರಾಮೀಣ ಭಾಗದ ಪ್ರೌಢಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ನೀಡುವುದು ಯೋಜನೆ ಮೂಖ್ಯ ಉದ್ದೇಶ

ಕವಿತಾಳ: ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ಅತಿ ಅವಶ್ಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿದೇರ್ಶಕ ಕೆ.ಡಿ ಬಡಿಗೇರ ಹೇಳಿದರು.

ಪಟ್ಟಣದ ಬಾಲಕಿಯ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ, ಜಿ.ಆರ್ ಇನ್ ಫ್ರಾ ಸೋಷಿಯಲ್ ವೆಲ್‌ಫೇರ್ ಟ್ರಸ್ಟ್, ಸಾರ್ವಜನಿಕ ಶಿಕ್ಷಣ ಇಲಾಖೆ ರಾಯಚೂರು ಮತ್ತು  ಬಾಲಕಿಯ ಪ್ರೌಢಶಾಲೆ ಸಂಯುಕ್ತಾಶ್ರಯಲ್ಲಿ ಹಮ್ಮಿಕೊಂಡಿದ್ದ ಐದು ಶಾಲೆಗಳಿಗೆ 3.6 ಲಕ್ಷ ಮೊತ್ತದ ಪ್ರೊಜೆಕ್ಟರ್ ಮತ್ತು ಸ್ಮಾರ್ಟ್ ಕ್ಲಾಸ್ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.

ಸ್ಮಾರ್ಟ್ ಕ್ಲಾಸ್‌ಗಳು ಶಿಕ್ಷಕರು ಮತ್ತು ಮಕ್ಕಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದಲ್ಲದೆ ಮಕ್ಕಳು ಬಹುಬೇಗ ವಿಷಯಗಳನ್ನು ಗ್ರಹಿಸುತ್ತಾರೆ. ತರಗತಿಯ ಡಿಜಿಟಲ್ ಪರದೆಯತ್ತ ತಮ್ಮ ಮನಸ್ಸುನ್ನು ಕೇಂದ್ರೀಕರಿಸುವುದರಿಂದ ಪಠ್ಯದ ವಿಷಯದಲ್ಲಿ ಬಹು ಬೇಗನೆ ಮಕ್ಕಳ ಮನಸ್ಸಿನಲ್ಲಿ ಉಳಿಯುತ್ತವೆ. ಶಿಕ್ಷಕರು ಪಠ್ಯಕ್ಕೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಉದಾಹರಣೆ ಮೂಲಕ ತೋರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಯಾವುದೇ ಗೊಂದಲಗಳಿರುವುದಿಲ್ಲ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಅಂಕ ಪಡೆದು ಶಾಲೆಗೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದರು.



ಪ್ರಾಜೆಕ್ಟ್ ಮ್ಯಾನೇಜರ್ ಮಾತನಾಡಿ ಲಕ್ಷ್ಮಿ ಕಾಂತ ಶಿಕ್ಷಕರು ಸ್ಮಾರ್ಟ್ ಬೋರ್ಡ ಬಳಸಿ ಸಮರ್ಥವಾಗಿ ಕಲಿಸುವ ಮೂಲಕ ಮಕ್ಕಳೂ ಡಿಜಿಟಲ್ ಸ್ಮಾರ್ಟ್ ಕ್ಲಾಸ್‌ಗಳು ಅಗತ್ಯ ಪಾತ್ರವಹಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ಸಿರವಾರ ತಹಶೀಲ್ದಾರ್ ಅಶೋಕ ಕುಮಾರ ಪವಾರ್, ಲಿಂಗಸಗೂರು ತಹಶೀಲ್ದಾರ್ ಸತ್ಯಮ್ಮ, ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿದ್ರಾಮಪ್ಪ, ಪಾಮನಕಲ್ಲೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಸವರಾಜ, ಚಿಕ್ಕಹೆಸರೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶರಣುಗೌಡ, ಹಣಗಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಮರೇಶ, ಸಹ ಶಿಕ್ಷಕರಾದ ಪ್ರಾಣೇಶ, ಗಿರೀಶ ಅಂಗಡಿ, ಶಂಕ್ರಯ್ಯ ಸ್ವಾಮಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ