LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ರಸ್ತೆ ಅಗಲೀಕರಣ ಸಂತ್ರಸ್ತರ ಧರಣಿಗೆ ಸೋಮಶೇಖರ ರೆಡ್ಡಿ ಬೆಂಬಲ

ಬಳ್ಳಾರಿ :  ನಗರದ ಬಾಪೂಜಿ ನಗರ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯಿಂದ ಮನೆ ಕಳೆದುಕೊಂಡ ಸಂತ್ರಸ್ತ ಕುಟುಂಬಗಳ ಹೋರಾಟಕ್ಕೆ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಬೆಂಬಲ ಸೂಚಿಸಿದರು.

ವಾರ್ಡ್ ನಂ. 7 ಮತ್ತು 8ಕ್ಕೆ ಸಂಪರ್ಕ ಹೊಂದಿರುವ ರಸ್ತೆ ಅಗಲೀಕರಣ ಕಾಮಗಾರಿಯ ವೇಳೆ ಕಳೆದ ವರ್ಷ ಇಪ್ಪತ್ತಕ್ಕೂ ಹೆಚ್ಚು ಕುಟುಂಬಗಳ ಮನೆಗಳನ್ನು ತೆರವುಗೊಳಿಸಲಾಗಿತ್ತು. ಆಗ ಸಂತ್ರಸ್ತರಿಗೆ ಪರ್ಯಾಯ ನಿವೇಶನ ಹಾಗೂ ವಸತಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಲಾಗಿತ್ತು ಎಂದು ಕುಟುಂಬಗಳು ಆರೋಪಿಸಿವೆ. ಆದರೆ ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂತ್ರಸ್ತರು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಸಂತ್ರಸ್ತ ಕುಟುಂಬಗಳ ಅಹವಾಲು ಆಲಿಸಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. ರಸ್ತೆ ಅಗಲೀಕರಣದ ವೇಳೆ ಮನೆ ಕಳೆದುಕೊಂಡವರಿಗೆ ಪರ್ಯಾಯವಾಗಿ ಮನೆ ಹಾಗೂ ನಿವೇಶನ ನೀಡುವುದು ನ್ಯಾಯಸಮ್ಮತವಾದ ಬೇಡಿಕೆಯಾಗಿದೆ ಎಂದು ಹೇಳಿದರು.

ಡೆಮಾಲಿಶ್ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನೀಡಿದ ಭರವಸೆಗಳನ್ನು ಈಗ ಆಡಳಿತ ನಡೆಸುತ್ತಿರುವವರು ಈಡೇರಿಸಬೇಕು. ಇಲ್ಲವಾದರೆ ಜನರಿಗೆ ಮೋಸ ಮಾಡಿದಂತಾಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನಡುವೆ, ರಸ್ತೆ ಕಾಮಗಾರಿ ಆರಂಭಿಸುವ ಮೊದಲು ಸುರಕ್ಷಿತ ಮತ್ತು ಕಾನೂನುಬದ್ಧ ನಿವೇಶನ ಒದಗಿಸಬೇಕು. ಇಲ್ಲದಿದ್ದರೆ ಕಾಮಗಾರಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸಂತ್ರಸ್ತ ಕುಟುಂಬಗಳು ಮತ್ತೊಮ್ಮೆ ಎಚ್ಚರಿಕೆ ನೀಡಿವೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ