ಬಿಜೆಪಿ ಜಿಲ್ಲಾ ಸಮಿತಿ ಪದಾಧಿಕಾರಿಗಳು, ನೂರಾರು ಕಾರ್ಯಕರ್ತರು ಧರಣಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರು ಮಾತನಾಡಿ, ಮಹಾನಗರ ಪಾಲಿಕೆ ಅಧಿಕಾರಿಗಳು, ನೌಕರರು ತಮ್ಮ ನ್ಯಾಯಯುತ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊAಡು ಕಳೆದ ೪ ದಿನಗಳಿಂದ ಧರಣಿ ನಡೆಸುತ್ತಿದ್ದು, ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಕೂಡಲೇ ಸರ್ಕಾರ ನೌಕರರ, ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರಕ್ಕೆ ಕಣ್ಣು ಇಲ್ಲ, ಕಿವಿಯೂ ಇಲ್ಲದಾಗಿದೆ. ರಾಜ್ಯದ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಡವರ ನೆಮ್ಮದಿ ಹಾಳಾಗಿದೆ. ಬೆಲೆ ಏರಿಕೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿಲ್ಲ. ಅಧಿಕಾರಕ್ಕಾಗಿ ತಮ್ಮ ತಮ್ಮ ಒಳ ಜಗಳದಲ್ಲೇ ನಿರತರಾಗಿದ್ದಾರೆ, ಬಡವರ ಕಷ್ಟ, ಸುಖಗಳನ್ನು ಆಲಿಸಲು ಸರ್ಕಾರ ಮುಂದಾಗುತ್ತಿಲ್ಲ. ಅವರಿಗೆ ಸಮಯವು ಇಲ್ಲದಾಗಿದೆ. ೫ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ನಿತ್ಯ ರಾಜ್ಯ ಕಾಂಗ್ರೆಸ್ ಸರ್ಕಾರ ಕಸರತ್ತು ಪಡುತ್ತಿದ್ದು, ಬಡಜನರ, ರೈತರ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಲು ಮುಂದಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕೆಎಂಎಫ್ ಮಾಜಿ ಅಧ್ಯಕ್ಷರು, ಮಾಜಿ ಶಾಸಕರಾದ ಜಿ. ಸೋಮಶೇಖರ್ ರೆಡ್ಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕ ಇಬ್ರಾಹಿಂ ಬಾಬು, ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಹನುಮಂತಪ್ಪ, ಬಿಜೆಪಿ ನಗರ ಘಟಕದ ನೂತನ ಅಧ್ಯಕ್ಷ ವೆಂಕಟರಮಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೀರಶೇಖರ್ ರೆಡ್ಡಿ, ರಾಜ್ಯ ಕಾರ್ಯದರ್ಶಿ ಕೆ.ಎಸ್.ದಿವಾಕರ್, ಮಹಾನಗರ ಪಾಲಿಕೆ ಸದಸ್ಯರಾದ ಕೆ. ಹನುಮಂತ, ಹನುಮಂತಪ್ಪ, ಸುರೇಖಾ ಮಲ್ಲನಗೌಡ, ಚೇತನ ವೇಮಣ್ಣ, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಸುಗುಣ ಸೇರಿದಂತೆ ಇತರರು ಇದ್ದರು.