ಕಾಂಗ್ರೆಸ್ ಸರ್ಕಾರದಿಂದ ಸ್ಟಿಕ್ಕರ್ ಸರ್ವೇ ಸ್ಕ್ಯಾಮ್ : ಆರ್. ಅಶೋಕ್
ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುತ್ತೇವೆ ಎನ್ನುವ ನೆಪವೊಡ್ಡಿ ಸಿಎಂ ಸಿದ್ದರಾಮಯ್ಯ ಸರ್ಕಾರ ನಡೆಸುತ್ತಿರುವ ಬೂಟಾಟಿಕೆ ಸಮೀಕ್ಷೆಯಲ್ಲಿ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಬಾಗಿಲು ತಟ್ಟದೇ, ಸಾರ್ವಜನಿಕರನ್ನು ಮಾತನಾಡಿಸದೆ ಕೇವಲ ಸ್ಟಿಕ್ಕರ್ ಅಂಟಿಸಲು ಸೀಮಿತವಾಗಿರುವ ಸಮೀಕ್ಷೆಯಲ್ಲಿ ಈಗ ಸ್ಟಿಕ್ಕರ್ ಮುದ್ರಣದಲ್ಲೂ ಲೂಟಿ ಹೊಡೆದ ಅಂಶ ಬೆಳಕಿಗೆ ಬಂದಿದೆ. ಬೇಕಾಬಿಟ್ಟಿಯಾಗಿ 87 ಲಕ್ಷ ರೂಪಾಯಿ ಮೌಲ್ಯದ ಸ್ಟಿಕ್ಕರ್ ಮುದ್ರಿಸಿ, ಈಗ 25 ಲಕ್ಷ ರೂಪಾಯಿ ಮೌಲ್ಯದ ಸ್ಟಿಕ್ಕರ್ ಗಳನ್ನು ಕಸದ ಬುಟ್ಟಿಗೆ ಎಸೆಯಲು ಹೊರಟಿರುವ ಕಾಂಗ್ರೆಸ್ ಸರ್ಕಾರ, ಜನರ ತೆರಿಗೆ ಹಣವನ್ನು ಹಗಲು ದರೋಡೆ ಮಾಡುತ್ತಿದೆ ಎಂದು ಟ್ವೀಟ್ ಮೂಲಕ ಆರೋಪಿಸಿದ್ದಾರೆ.
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.