LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ತಿಂಗಳಾಂತ್ಯದೊಳಗೆ ಒಳಮೀಸಲು ಖಚಿತ

ನ್ಯಾ.ನಾಗಮೋಹನ್ ದಾಸ್  ವರದಿ ವೈಜ್ಞಾನಿಕ

ಮುಖ್ಯಮಂತ್ರಿ ಬದ್ಧತೆ ಪ್ರಶ್ನಾತೀತ

ಚಿತ್ರದುರ್ಗ : ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ  ಗುರುವಾರದ ನಡೆದ ಸಚಿವ ಸಂಪುಟ ಸಭೆ ಮಾದಿಗ ಸೇರಿ ಪರಿಶಿಷ್ಟಜಾತಿ ಗುಂಪಿನಲ್ಲಿನ 101 ಜಾತಿಗಳಿಗೆ ಸಿಹಿಸುದ್ದಿಯ ಸೂಚನೆ ನೀಡಿದ್ದು, ಈ ತಿಂಗಳಾಂತ್ಯದೊಳಗೆ ಒಳಮೀಸಲಾತಿ ಜಾರಿಗೊಳ್ಳಲಿದೆ ಎಂಬ ವಿಶ್ವಾಸವನ್ನು ಮಾಜಿ ಸಚಿವ ಎಚ್.ಆಂಜನೇಯ ವ್ಯಕ್ತಪಡಿಸಿದ್ದಾರೆ.

 

ಈ ಸಂಬಂಧ ಹೇಳಿಕೆ ನೀಡಿರುವ ಆಂಜನೇಯ, ದೇಶದಲ್ಲಿಯೇ ಪ್ರಥಮ ಬಾರಿಗೆ ಅತ್ಯಂತ ವೈಜ್ಞಾನಿಕವಾಗಿ ಜಾತಿಗಣತಿ ಸಮೀಕ್ಷೆ ನಡೆಸಿದ ನ್ಯಾ.ನಾಗಮೋಹನ್ ದಾಸ್ ಆಯೋಗದ ಕಾರ್ಯ ಶ್ಲಾಘನೀಯ ಎಂದಿದ್ದಾರೆ.



ಬರೋಬ್ಬರಿ 60 ದಿನಗಳ ಕಾಲ 1 ಕೋಟಿ 7 ಲಕ್ಷ  ಜನರನ್ನು ಸಮೀಕ್ಷೆ ನಡೆಸಿ, ಅವರವರ ಜನಸಂಖ್ಯೆ, ಹಿಂದುಳಿಯುವಿಕೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ದಾಖಲಿಸಿರುವುದು ಐತಿಹಾಸಿಕ ದಾಖಲೆಯಾಗಿದೆ.

 

ಯಾರೋಬ್ಬರು ಜಾತಿಗಣತಿಯಿಂದ ಹೊರಗುಳಿಯದಂತೆ ಮನೆ ಮನೆ ಭೇಟಿ, ಬ್ಲಾಕ್ ಮಟ್ಟ, ಆನ್ ಲೈನ್ ಮೂರು ರೀತಿ ನೋಂದಣಿಗೆ ಅವಕಾಶ ನೀಡುವ ಮೂಲಕ ಸಣ್ಣ ಅಪಸ್ವರಕ್ಕೂ ಅವಕಾಶ ಇಲ್ಲದಂತೆ ಸಮೀಕ್ಷೆ ನಡೆಸಲಾಗಿದ್ದು, ಇದು ಅತ್ಯಂತ ವೈಜ್ಞಾನಿಕ ವರದಿ ಎಂಬುದಕ್ಕೆ ಉತ್ತಮ ಉದಾಹರಣೆ ಆಗಿದೆ ಎಂದಿದ್ದಾರೆ.

 

ವರದಿ ಸಲ್ಲಿಕೆ, ಜಾರಿ ಆಗಲಿದೆ ಎಂಬ ಅನಗತ್ಯ ಆರೋಪ, ಹೋರಾಟಗಳಿಗೆ ಆಯೋಗದ ನಡೆ, ಸಚಿವ ಸಂಪುಟದ ನಿರ್ಧಾರ ಸ್ಪಷ್ಟ ಉತ್ತರ ನೀಡಿದೆ ಎಂದಿದ್ದಾರೆ.

 

ಪ್ರಜಾಪ್ರಭುತ್ವದಡಿ ಸರ್ವರ ಅಭಿಪ್ರಾಯದಡಿ ಒಳಮೀಸಲಾತಿ ಜಾರಿಗೆ ದಿಟ್ಟ ನಿರ್ಧಾರ ಗುರುವಾರದ ಸಚಿವ ಸಂಪುಟ ಕೈಗೊಂಡಿರುವುದು ಸ್ವಾಗತರ್ಹ. ಮುಂದಿನ  (ಆಗಸ್ಟ್ 14) ಸಚಿವ ಸಂಪುಟ ಸಭೆಯಲ್ಲಿ ವರದಿಗೆ ಅಧಿಕೃತವಾಗಿ ಒಪ್ಪಿಗೆ ಮುದ್ರೆ ನೀಡಿ, ಬರುವ  ಅಧಿವೇಶನದಲ್ಲಿ ಮಂಡಿಸಿ, ಬಿಲ್ ಪಾಸು ಮಾಡಿ ಕಾನೂನು ರಚಿಸಿ ರಾಜ್ಯಪಾಲರಿಗೆ ಕಳುಹಿಸಿ ಒಪ್ಪಿಗೆ ಪಡೆಯಬೇಕು. ಈ ಎಲ್ಲ ಪ್ರಕ್ರಿಯೆಗಳು ಆಗಸ್ಟ್ ತಿಂಗಳಲ್ಲಿಯೇ ಪೂರ್ಣಗೊಂಡು ಮಾದಿಗರಿಗೆ ಮೀಸಲಾತಿ ಸ್ವಾತಂತ್ರ್ಯ ನೀಡಬೇಕು.

 



ಈ ನಿಟ್ಟಿನಲ್ಲಿ ಸಾಮಾಜಿಕ ಹರಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆ ಪ್ರಶ್ನಾತೀತವಾಗಿದ್ದು, ದಿಟ್ಟ ನಡೆ ಕೈಗೊಳ್ಳುವುದು ಖಚಿತ ಎಂಬ ವಿಶ್ವಾಸವನ್ನು ಆಂಜನೇಯ ವ್ಯಕ್ತಪಡಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ