LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಟುಂಬ ರಾಜಕಾರಣದ ಮುಕ್ತಿಯೇ ಕೆಆರ್ ಎಸ್ ಪಕ್ಷದ ಧ್ಯೇಯ.

ಅಕ್ರಮ ಗಣಿ ಸಂಪತ್ತಿಗೆ KRS ಪಕ್ಷದ ಸವಾಲ್

ಬಳ್ಳಾರಿಯಲ್ಲಿ ನಡೆದ ಎದ್ದೇಳು ಕನ್ನಡಿಗ, ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ.

ಬಳ್ಳಾರಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿ ರಾಯಲ್ ಸರ್ಕಲ್,ಬೆಂಗಳೂರು ರಸ್ತೆ ಮೂಲಕ ಮೀನಾಕ್ಷಿ ಸರ್ಕಲ್  ಮೂಲಕ ಪಾದಯಾತ್ರೆ ಮಾಡಿ ಅಭಿಯಾನದ ಕುರಿತು ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು.



ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಶ್ರೀ ಸೋಮಸುಂದರ ಅವರು  ಇತ್ತೀಚಿನ ದಿನಗಳಲ್ಲಿ ಕನ್ನಡಿಗರು ಅನುಭವಿಸುತ್ತಿರುವ ನೋವುಗಳಿಗೆ,ಕಷ್ಟ ಕಾರ್ಪಣ್ಯಗಳಿಗೆ ನಮ್ಮನ್ನು ಆಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ನೇರವಾಗಿ ಕಾರಣ.ಅವರವರ ಸ್ವಾರ್ಥದ ಮತ್ತು ಕುಟುಂಬದ ರಾಜಕಾರಣದಲ್ಲಿ ರಾಜ್ಯದ ಮತದಾರರನ್ನು ಮೂರ್ಖರನ್ನಾಗಿ ಮಾಡಿ ಜನರನ್ನು ವಂಚಿಸುತ್ತಿದ್ದಾರೆ ಜನಪರವಾದ ಆಡಳಿತ ನಡೆಸಬೇಕಾದ ಪಕ್ಷಗಳು ಜಾತಿ ರಾಜಕಾರಣ, ಹಣಬಲದ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ ಹಾಗಾಗಿ ನಮ್ಮ ಪಕ್ಷವು ಕನ್ನಡ ನಾಡಿನ ನೆಲ,ಜಲ,ಗಡಿ ಭಾಷೆಯ ಉಳಿವಿಗಾಗಿ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡುವಿಕೆಗಾಗಿ ಒತ್ತಾಯಿಸಿ ಮುಂದಿನ ನವಂಬರ್ ತಿಂಗಳಲ್ಲಿ ಒಂದು ಬಹುದೊಡ್ಡ ಸಮಾವೇಶ ಆಯೋಜಿಸಲಾಗುತ್ತಿದ್ದು ಸಮಸ್ತ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

 

ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀ ಜೋಗನಹಳ್ಳಿ ಗುರುಮೂರ್ತಿ ಅವರು ಮಾತನಾಡಿ ಲಂಚಮುಕ್ತ-ಬ್ರಷ್ಟ ಚಾರ ಮುಕ್ತ ಕರ್ನಾಟಕಕ್ಕಾಗಿ,ಕುಟುಂಬ ರಾಜಕಾರಣ ತೊಲಗಿಸಲು,ನಿರುದ್ಯೋಗ ನಿವಾರಣೆಗಾಗಿ,ರೈತರ ಜೀವನಮಟ್ಟ ಸುಧಾರಣೆಗಾಗಿ,ಜನಸ್ನೇಹಿ ವ್ಯವಸ್ಥೆ ಕಟ್ಟಲಿಕ್ಕಾಗಿ, ಸರ್ವ ಜನಾಂಗದ ಅಭಿವೃದ್ಧಿಗಾಗಿ, ಕನ್ನಡ,ಕರ್ನಾಟಕದ ಅಸ್ಮಿತೆಗಾಗಿ ಕನ್ನಡಿಗರನ್ನು ಜಾಗೃತಿ ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದು ಇದಕ್ಕೆ ಕನ್ನಡಪರ,ರೈತಪರ,ಪ್ರಗತಿಪರ ಸಂಘಟನೆಗಳ ಮುಖಂಡರು,ನಾಯಕರು ಬೆಂಬಲಿಸಬೇಕೆಂದು ವಿನಂತಿಸಿದರು.



ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಆನಂದ್,ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ,ಶಿವರಾಜ್ ಕಪಗಲ್, ಎಸ್ಸಿ ಎಸ್ಟಿ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್ ಕುಮಾರ್,ಶ್ರೀನಿವಾಸ ರೆಡ್ಡಿ, ಯುವ ಘಟಕದ ರಾಜ್ಯ ಕಾರ್ಯದರ್ಶಿ ಖಾದರಬ್ಬಾಷಾ ಜಿಲ್ಲಾಧ್ಯಕ್ಷ ಯುಗಂದರ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರೆಡ್ಡಿ,ಕಾರ್ಯದರ್ಶಿಗಳಾದ ಮಂಜುನಾಥ್,ಜಾನ್, ಅನೀಫ್, ಜನಾರ್ಧನ ರೆಡ್ಡಿ, ನಾಗರಾಜ್,ರವಿ ಗೋನಾಳ, ಶ್ರೀನಿವಾಸ ಗೋನಾಳ,ಖಾದರಬಾಷ, ಮಂಜುನಾಥ್ ಗೌಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST