LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸರಕಾರದಿಂದ ಜನರಿಗೆ ನ್ಯಾಯ ಒದಗಿಸುವ ಕೆಲಸ

ಕಲಬುರ್ಗಿ: ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದುಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

 

ಕಲಬುರಗಿ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು.

 

ಬರಗಾಲಕ್ಕೆ ಸಿಲುಕಿರುವ ಕಲ್ಯಾಣ ಕರ್ನಾಟಕದ ಭಾಗಕ್ಕೆ ಸರಕಾರದ ಕೊಡುಗೆ ಏನು ಎಂದು ಕೇಳಿದಾಗ, “ನಾನು ಬರಗಾಲ ಪರಿಸ್ಥಿತಿ ಅವಲೋಕಿಸಲು ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂದಿದ್ದೇನೆ. ಇಲ್ಲಿನ ಜನರು ಮತ್ತು ಜನಪ್ರತಿನಿಧಿಗಳನ್ನು ಭೇಟಿ ಮಾಡಿದ್ದೇನೆ. ಇಲ್ಲಿನ ಪರಿಸ್ಥಿತಿಯ ಅವಲೋಕನಕ್ಕೆ ಸಭೆ ನಡೆಸುತ್ತಿದ್ದೇನೆ. ಅದೇ ರೀತಿ ಎರಡು ಮೂರು ದಿನ ಬಿಟ್ಟು ಬೆಳಗಾವಿಗೂ ಭೇಟಿ ನೀಡುತ್ತಿದ್ದೇನೆಎಂದರು.

 

ಸಮಸ್ಯೆ ಬಗೆಹರಿಸಬೇಕು ಎಂದು ಜನರು ಬೇಡಿಕೆಗಳನ್ನು ಮಂಡಿಸಿದ್ದಾರೆ. ಅವರ ಸಮಸ್ಯೆ ಆಲಿಸಲು ಹೊಸದಾಗಿ ಪ್ರಜಾಸೇವಾ ಇಲಾಖೆ ಸ್ಥಾಪಿಸಿ, ಸಚಿವರನ್ನು ನೇಮಕ ಮಾಡಿ, ಜನರ ಅರ್ಜಿಗಳನ್ನು ಪರಿಶೀಲಿಸಿ ಅವರಿಗೆ ಸಾಧ್ಯವಾದಷ್ಟು ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡುತ್ತದೆಎಂದರು.

news_1783422006_0_968.webp

 

ಇದಕ್ಕೂ ಮೊದಲು ಮುಖ್ಯಮಂತ್ರಿಯವರು ಕಲಬುರ್ಗಿ ಸರಕಾರಿ ಅತಿಥಿ ಗೃಹದ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ರೈತರು ಕಬ್ಬಿನ ಜಲ್ಲೆ ಜತೆಗೆ ತಮ್ಮ ಅಹವಾಲುಗಳನ್ನು ನೀಡಿದರು. ಮಳೆ ಕೊರತೆ ಉಂಟಾಗಿದೆ, ಬರಗಾಲ ಪೀಡಿತ ಎಂದು ಘೋಷಣೆ ಮಾಡಿ ಎಂದು ರೈತರು ಮನವಿ ಮಾಡಿದರು. “ ಪರಿಸ್ಥಿತಿಯನ್ನು ಕಣ್ಣಾರೆ ನೋಡಲೆಂದೇ ನಾನು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆಎಂದರು.

 

ರೈತರ ಸಾಲ ಮನ್ನಾ ವಿಚಾರ ಹಾಗೂ ತಮಿಳುನಾಡು, ಮಹಾರಾಷ್ಟ್ರಗಳಲ್ಲಿ ರೈತರ ಸಾಲ ಮನ್ನಾ ಮಾಡಿರುವ ಬಗ್ಗೆ ಕೇಳಿದಾಗ, “ಎಲ್ಲಿಯ ಸಾಲ, ಯಾವ ಸಾಲ ಎಂಬುದನ್ನು ಪರಿಶೀಲನೆ ಮಾಡೋಣಎಂದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ