LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯೇಸು ಕ್ರಿಸ್ತನ ಜನನು ಹೀಗಾಯಿತು

ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.

ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.

ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.

 

ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.

ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.

ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.



ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುAಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.

ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ. ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು. ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು. ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊAಡರು. ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು. ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು. ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು. ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.

ಯೋಹಾನನು 3:16

ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕಳುಹಿಸಿ ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.

ರೋಮಾಪುರದವರಿಗೆ 5:8

“ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.”

ರೋಮಾಪುರದವರಿಗೆ 3:23

“ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.”

ರೋಮಾಪುರದವರಿಗೆ 6:23

“ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.”

2ಕೊರಿಂಥದವರಿಗೆ ಪತ್ರಿಕೆ 5:21

“ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆAದು ದೇವರು ಹೀಗೆ ಮಾಡಿದರು.”

ಎಫೆಸದವರಿಗೆ  1:7

“ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.”

2ಕೊರಿಂಥದವರಿಗೆ ಪತ್ರಿಕೆ 5:17

ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.”

ಯೋಹಾನನು 3:17

ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.”

ಯೋಹಾನನು 1:12

ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.”

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೇ ವರದ ಮಗನು ನಮಗೆ ದೊರೆತನು, ಆಡಳಿತವು ಅವನ ಬಾಹುವಿನ ಮೇಲಿರುವುದು. ಅದ್ಭುತ ಸ್ವರೂಪನು, ಅಲೋಚನ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು. ಪ್ರವಾದಿ ಯೆಶಾಯನ ಗ್ರಂಥ 9:6



ಬಿಷಪ್ ಡಾ.ಸತೀಶ್ ಕೆ.

ಅಂತ್ಯಕಾಲ ಪ್ರಾರ್ಥನ ಮಂದಿರ, ಚಳ್ಳಕೆರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST