LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ತಿಪಟೂರು -ವಿವೇಕಾನಂದ ಇಂಟೆರ್ ನ್ಯಾಷನಲ್ ಶಾಲಾ ವಾರ್ಷಿಕೋತ್ಸವ

ತಿಪಟೂರು: ಪೋಷಕರ ನಡುವಿನ ಅಭಿನಾಭಾವ ಸಂಬಂಧದೊಂದಿಗೆ ನಮ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಸಾಧ್ಯವಾಗಿ, ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬರಿಗೂ ತಲುಪಲು ಸಹಕಾರಿಯಾಗುತ್ತಿದೆ. ಶಿಸ್ತು, ಸಮಯ ಪಾಲನೆ, ಪೋಷಕರ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಉನ್ನತ ಮಟ್ಟಕ್ಕೆ ಏರಲು ಸಾಧ್ಯವಾಗಿದೆ ಎಂದು ಶ್ರೀ ವಿವೇಕಾನಂದ ಇಂಟರ್ನ್ಯಾಷನಲ್ ಶಾಲೆ ಮತ್ತು ಕಿಡ್ಡಿ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ಟಿ.ಆರ್.ಕೇಶವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

 

ನಗರದ ಹಾಲ್ಕುರಿಕೆ ರಸ್ತೆಯಲ್ಲಿರುವ ಶಂಕರನಗರದ ಎಸ್‌ವಿಐಎಸ್ ಮತ್ತು ಕಿಡ್ಡಿ ಶಾಲೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಯ ವಿದ್ಯಾರ್ಥಿಗಳನ್ನು ಪ್ರೋತ್ಸಾ ಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ 17ನೇ ವರ್ಷದ ಮಕ್ಕಳ ಪ್ರತಿಭೆಯ ಅನಾವರಣ ಹಾಗೂ ಕೌಶಲ್ಯ ಸಾಂಸ್ಕೃತಿಕ-2026 ಕಾರ್ಯಕ್ರಮ ವಾದ ಶಾಲಾ ವಾರ್ಷಿಕೋತ್ಸವವನ್ನು ಇದೆ ತಿಂಗಳ ಜ.8 ರಿಂದ ಜ.10 ರವರೆಗೆ ಮೂರು ದಿನಗಳ ಕಾಲ ಅದ್ದೂರಿಯಾಗಿ ನಗರದ ಈಡೇನಹಳ್ಳಿ ಗೇಟ್ ಬಳಿ ಇರುವ ಎಸ್.ಎನ್.ಎಸ್ ಕನ್ವೆಷನ್ ಹಾಲ್ ನ ಯೋಗೀಶ್ ವೇದಿಕೆಯಲ್ಲಿ, ಜ.8ರಂದು ಬೆಳಿಗ್ಗೆ 10:30ಕ್ಕೆ ಶಾಲೆ ವಿದ್ಯಾರ್ಥಿಗಳಿಂದ ಮಕ್ಕಳ ಪ್ರತಿಭೆ ಕಾರ್ಯಕ್ರಮದ  ಮೂಲಕ ಉದ್ಘಾಟನೆಯಾಗಿ, ಸಂಜೆ 04 ಗಂಟೆಗೆ ಎಸ್ ವಿಐಎಸ್ 1, 2 ಮತ್ತು 3 ನೇ ತರಗತಿ ವಿದ್ಯಾರ್ಥಿಗಳಿಂದ ಕಾರ್ಯಕ್ರಮ. ಜ.9 ರ ಬೆಳಿಗ್ಗೆ 10:30ಕ್ಕೆ ಎಸ್.ವಿ.ಐ.ಎಸ್ 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿಂದ ಮಕ್ಕಳ ಕೌಶಲ್ಯ ಎಂಬ ಕಾರ್ಯಕ್ರಮದಡಿ ಸಾಂಸ್ಕೃತಿಕ ಕಾರ್ಯಕ್ರಮ. ಸಂಜೆ 4:00 ಗಂಟೆಗೆ 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಂದ ಧೈರ್ಯ, ಉತ್ಸಾ ಹ ಸೇರಿದಂತೆ ಸಾಂಸ್ಕೃತಿಕ ವೈಭವ ಹಾಗೂ ಜ.10ರಂದು ಬೆಳಿಗ್ಗೆ 10.30 ಕ್ಕೆ ಸಮಾರೋಪ ಸಮಾರಂಭದಲ್ಲಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಂದ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ ಅದ್ದೂರಿ ರಸದೌತಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿ ವರ್ಗ,

ಚುನಾಯಿತ ಜನಪ್ರತಿನಿಧಿಗಳು, ಶಾಲಾ ಸಿಬ್ಬಂದಿ ವರ್ಗ ಸೇರಿದಂತೆ ಮುಖಂಡರುಗಳು ಹಾಜರಿದ್ದು, ಪೋಷಕರು ನಿಗದಿತ ಸಮಯಕ್ಕೆ ಹಾಜರಾಗಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆತಿತ್ಯವನ್ನು ನಮ್ಮ ಸ್ವೀಕರಿಸಬೇಕೆಂದು, ಮುಂದಿನ ದಿನದಲ್ಲಿ ದೇಶ ವಿದೇಶಗಳ ಖಾಸಗಿ ಶಿಕ್ಷಣ ಸಂಸ್ಥೆಗಳು ಅನುಸರಿಸಿರುವ ಮಾರ್ಗಗಳನ್ನು ನಮ್ಮ ಶಾಲೆಗೆ ಅಳವಡಿಸಿ, ಅತಿಹೆಚ್ಚಿನ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಹಾಗೂ ಮುಂದಿನ ವರ್ಷ ಆಡಿಟೋರಿಯಂ ನಿರ್ಮಿಸುವ ಆಲೋಚನೆ ಇದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿ ಯಲ್ಲಿ ಶಾಲೆಯ ಪ್ರಿನ್ಸಿಪಾಲ್ ಹಾಗೂ ಸಂಯೋಜಕರು ಹಾಜರಿದ್ದರು

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ