LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಅಗಲಿದ ನಾಯಕನಿಗೆ 26ಕ್ಕೆ ನುಡಿನಮನ

ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ.ಸುಧಾಕರ್ ಅವರ ನುಡಿನಮನ ಕಾರ್ಯಕ್ರಮ ಜು.26 ಭಾನುವಾರ ಆಯೋಜಿಸಿದ್ದು, ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ

ಸಂಖ್ಯೆಯಲ್ಲಿ ಪಾಲ್ಗೊಂಡು ಅಗಲಿದ ನಾಯಕನ ಸೇವೆ ಸ್ಮರಿಸಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

 

ಹಿರಿಯೂರಿನ ನೆಹರು ಮೈದಾನದಲ್ಲಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದ ಡಿ.ಸುಧಾಕರ್ ಎಲ್ಲ ಜಾತಿ-ಧರ್ಮದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚಳ್ಳಕೆರೆ-ಹಿರಿಯೂರು ಕ್ಷೇತ್ರದಲ್ಲಿ ನಿರಂತರ ಗೆಲುವು ಸಾಧಿಸಿ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಸೇವೆ ಸ್ಮರಣೀಯ ಎಂದರು.

 

ಎರಡು ಬಾರಿ ಮಂತ್ರಿ, ಒಮ್ಮೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವರು ಜಿಲ್ಲೆಯ ಸಮಗ್ರ ಪ್ರಗತಿಗೆ ಅವಿರತವಾಗಿ ಶ್ರಮಿಸುತ್ತಿದ್ದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ

ಮಹಿಳೆ, ರೈತರು, ಅಶಕ್ತ ವರ್ಗದ ಜನರ ನೆರವಿಗೆ ಧಾವಿಸುತ್ತಿದ್ದರು. ಆದರೆ, ಮಂಡಿ ನೋವು

ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿ ಶ್ವಾಶಕೋಶದ ತೊಂದೆಯಿಂದ ನಮ್ಮನ್ನು ಅಗಲಿದ್ದು ಅತ್ಯಂತ ನೋವು. ಈಗ ಅವರ ಸೇವೆ ಸ್ಮರಿಸುವ ಕಾರ್ಯದೊಂದಿಗೆ ಅವರಿಗೆ ನುಡಿನಮನ ಸಲ್ಲಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಆಗಿದೆ ಎಂದು ತಿಳಿಸಿದರು.

 

ಆದ್ದರಿಂದ ಜು.26 ಭಾನುವಾರ ಹಿರಿಯೂರಿನ ನೆಹರು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ

ಆಯೋಜಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ

ಸಕಲ ಸಿದ್ಧತೆ ನಡೆಸಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಡಿಸಿಎಂ ಡಾ.ಜಿ.ಪರಮೇಶ್ವರ್

ಸೇರಿ ಅನೇಕ ಸಚಿವರು, ಶಾಸಕರು, ಸಂಸದರು, ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

 

ಹಿನ್ನೆಲೆಯಲ್ಲಿ ನಾಡಿನ ಅಪರೂಪದ ರಾಜಕಾರಣಿ ಆಗಿದ್ದ ಡಿ.ಸುಧಾಕರ್ ನುಡಿನಮನ

ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಅವರ ಅಭಿಮಾನಿಗಳು, ಕಾರ್ಯಕರ್ತರು, ಬೆಂಬಲಿಗರು

ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ