LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ನಾಯಕನಹಟ್ಟಿ : ಪಟ್ಟಣ ಪಂಚಾಯಿತಿಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ.ತಿಪ್ಪೇಸ್ವಾಮಿಯವರಿಂದ ತೆರವಾದ ಸ್ಥಾನಕ್ಕೆ ಪಟ್ಟಣ ಪಂಚಾಯಿತಿಯ ಕಾಂಗ್ರೆಸ್ ಪಕ್ಷದ ಸರ್ವ ಸದಸ್ಯರುಗಳು ಒಪ್ಪಿಗೆ ಮೇರೆಗೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಅನ್ವರ್‌ರವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು. ಪಟ್ಟಣ ಪಂಚಾಯಿತಿ ಸದಸ್ಯೆ ಮೂರನೇ ವಾರ್ಡ್ನ ಮಹೇಶ್ವರಿ, 16 ವಾರ್ಡ್ನ ಓಬಯ್ಯ ದಾಸ್ ರವರನ್ನು ಸ್ಥಾಯಿ ಸಮಿತಿ ಸದಸ್ಯರನ್ನಾಗಿ ಮಾಡಿದರು.



ನೂತನ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಅನ್ವರ್ ಮಾನತಾಡಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದಂತಹ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜೂಳ ಶ್ರೀಕಾಂತ್, ಉಪಾಧ್ಯಕ್ಷೆ ಬೋಸಮ್ಮ ಮಂಜುನಾಥ ಹಾಗೂ ಕಾಂಗ್ರೆಸ್ ಪಕ್ಷದ ಸರ್ವ ಸದಸ್ಯರುಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸ್ವಚ್ಚತೆಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ನಾನು ಮೊದಲನೇ ಆದ್ಯತೆ ನೀಡುತ್ತೇನೆ ಅಭಿವೃದ್ಧಿ ವಿಚಾರದಲ್ಲಿ ಪ್ರಾಮಾಣೀಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST