LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿ ಗಮನಸೆಳೆದ ಏಕತಾ ನಡಿಗೆ

ಭಾರತದ ಐಕ್ಯತೆಗಾಗಿ ಪ್ರತಿಯೊಬ್ಬರೂ ದೇಶಪ್ರೇಮ ಹೊಂದಬೇಕು: ವೈ.ಎಂ.ಸತೀಶ್

ಬಳ್ಳಾರಿ : ಮೊದಲು ನಾವು ಭಾರತೀಯರು. ಜಾತಿ, ಮತ, ಪಂಥ, ಭೇದಭಾವ ಮರೆತು ನಾವೆಲ್ಲರೂ ಭಾರತದ ಐಕ್ಯತೆಗಾಗಿ ಶ್ರಮಿಸುವ ಮೂಲಕ ದೇಶಪ್ರೇಮ ಹೊಂದಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರು ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೇಂದ್ರ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದಡಿಯ ಮೇರಾ ಯುವ ಭಾರತ್ ಕೇಂದ್ರ, ಮಹಾನಗರ ಪಾಲಿಕೆ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ರಾಷ್ಟಿçÃಯ ಯೋಜನಾ ಘಟಕ, ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಂಯುಕ್ತಾಶ್ರಯದಲ್ಲಿ ಉಕ್ಕಿನ ಮನುಷ್ಯ ಮತ್ತು ರಾಷ್ಟ್ರೀಯ ಏಕತೆಯ ಪ್ರತಿಪಾದಕ ಸರ್ದಾರ್ ವಲ್ಲಭಭಾಯಿ ಅವರ 150 ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ಏಕತಾ ನಡಿಗೆಯ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಮೊದಲ ಉಪಪ್ರಧಾನ ಮಂತ್ರಿ ಹಾಗೂ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಭಾರತದ ‘ಉಕ್ಕಿನ ಮನುಷ್ಯ’ ಎಂದೇ ಪ್ರಖ್ಯಾತರಾಗಿದ್ದರು. ಭಾರತದ 550 ಕ್ಕೂ ಹೆಚ್ಚು ರಾಜಪ್ರಭುತ್ವದ ರಾಜ್ಯಗಳನ್ನು ಭಾರತಕ್ಕೆ ಸೇರಿಸುವಲ್ಲಿ ಮುಖ್ಯ ಪಾತ್ರವಹಿಸಿದ್ದರು ಎಂದು ತಿಳಿಸಿದರು.



ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ, ಒಂದುಗೂಡಿಸಿದ ಭಾರತದ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರವಾಗಿದೆ. ಅಖಿಲ ಭಾರತ ನಾಗರಿಕ ಸೇವೆಯನ್ನು ಸ್ಥಾಪಿಸಿದರು ಎಂದು ತಿಳಿಸಿದ ಅವರು. ಯುವಪೀಳಿಗೆಯು ದೇಶಭಕ್ತಿ ಮತ್ತು ದೇಶಪ್ರೇಮ ಹೊಂದುವ ಮೂಲಕ ಭಾರತದ ಐಕ್ಯತೆ ಹಾಗೂ ಅಭಿವೃದ್ಧಿಗಾಗಿ ಕೈಜೋಡಿಸಬೇಕು ಎಂದು ಹೇಳಿದರು.

ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಮಾತನಾಡಿ, ಹಲವು ತ್ಯಾಗ-ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ಲಭಿಸಿದ್ದು, ಅದನ್ನು ಉಳಿಸಿಕೊಳ್ಳುವ ಮತ್ತು ಬೆಳೆಸುವ ಕೆಲಸವಾಗಬೇಕು. ಇಂದಿನ ಯುವ ಪೀಳಿಗೆ ಉನ್ನತ ಮಟ್ಟದ ಸ್ಥಾನ ಹೊಂದುವ ಮೂಲಕ ಸ್ವ-ದೇಶದಲ್ಲಿಯೇ ದುಡಿಯಬೇಕು. ದೇಶದ ಜಿಡಿಪಿ ಹೆಚ್ಚಳಕ್ಕೆ ಕಾರಣೀಭೂತರಾಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.



ಏಕತಾ ನಡಿಗೆಯ ರಾಜ್ಯ ಸಂಚಾಲಕ ಮಂಜುನಾಥ ಬಾಳೆಕಾಯಿ ಅವರು ಮಾತನಾಡಿ, ಪ್ರಪಂಚದಲ್ಲಿಯೇ ಸದೃಢ ಹೊಂದಿದ ದೇಶ ನಮ್ಮದು. ನಮ್ಮ ದೇಶದ ಸೈನಿಕರ ಉಸಿರಿನಿಂದ ದೇಶದಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತಿದೆ. ಚಂದ್ರನ ಮೇಲೆ ಮತ್ತು ಮುಂದಿನ ದಿನಗಳಲ್ಲಿ ಮಂಗಳನ ಅಂಗಳದಲ್ಲಿ ನಮ್ಮ ದೇಶದ ತ್ರಿವರ್ಣ ಧ್ವಜ ಹಾರಾಡಲಿದೆ ಎಂದು ಸೇನೆಯ ಕರ್ತವ್ಯವನ್ನು ಬಣ್ಣಿಸಿದರು.

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಜಾರಿಗೊಳಿಸುವ, ದೇಶದ ರಕ್ಷಣೆಯ ವ್ಯವಸ್ಥೆಯನ್ನು ರೂಪಿಸುವ ಹಾಗೂ ಭಾರತವನ್ನು ಒಗ್ಗಟ್ಟಾದ ದೇಶವನ್ನಾಗಿ ಕಟ್ಟುವ ಮಹತ್ತರ ಜವಾಬ್ದಾರಿಯನ್ನು ಸರ್ದಾರ್ ವಲ್ಲಭಬಾಯಿ ಪಟೇಲರು ನಿರ್ವಹಿಸಿದ್ದರು ಎಂದು ತಿಳಿಸಿದರು.

2018ರ ಅ.31 ರಂದು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಗುಜರಾತ್‌ನ ನರ್ಮದಾ ನದಿಯ ದಡದಲ್ಲಿ ಪಟೇಲ್ ಅವರ 182 ಮೀ. ಎತ್ತರದ ಏಕತಾ ಪ್ರತಿಮೆಯನ್ನು ಉದ್ಘಾಟಿಸಿದರು ಎಂದರು.

ಕಾರ್ಯಕ್ರಮದಲ್ಲಿ ಆತ್ಮ ನಿರ್ಭರ ಭಾರತ್ ಕುರಿತಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಗಮನಸೆಳೆದ ಏಕತಾ ನಡಿಗೆ:



ಕಾರ್ಯಕ್ರಮಕ್ಕೂ ಮುನ್ನ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆ ಅಂಗವಾಗಿ ನಗರದಲ್ಲಿ ಪ್ರಮುಖ ಬೀದಿಗಳಲ್ಲಿ ಜರುಗಿದ ಏಕತಾ ನಡಿಗೆ ಜನರ ಗಮನಸೆಳೆಯಿತು.

ಏಕತಾ ನಡಿಗೆಯಲ್ಲಿ ವಿವಿಧ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಒಳಗೊಂಡಂತೆ ಸಹಸ್ರಾರು ಜನ ಭಾಗವಹಿಸಿದ್ದು ವಿಶೇಷವಾಗಿತ್ತು.

ನಡಿಗೆಗೆ ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ನಡಿಗೆಯು ನಗರದ  ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿಪೂರ್ವ ಕಾಲೇಜು ಮೈದಾನದಿಂದ ಆರಂಭಗೊಂಡು ಗಡಿಗಿ ಚೆನ್ನಪ್ಪ ವೃತ್ತ- ಬೆಂಗಳೂರು ರಸ್ತೆ- ಹಳೆಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯ ಮುಂಭಾಗ- ಹೆಚ್.ಆರ್.ಗವಿಯಪ್ಪ ವೃತ್ತ- ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮದ ವರೆಗೆ ನಡೆಯಿತು.

ಈ ವೇಳೆ ಮೇರಾ ಯುವ ಭಾರತ್ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಸಂಜೀವ್ ಬೊಕ್ಕೆ, ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಡಾ.ಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀನಿವಾಸ್ ಮೋತ್ಕಾರ್, ಸುರೇಖಾ ಮಲ್ಲನಗೌಡ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹೆಚ್.ಹನುಮಂತಪ್ಪ, ಜಿಲ್ಲಾ ಸಂಚಾಲಕರಾದ ಅನೀಲ್ ಕುಮಾರ್ ಮೋಕಾ, ಹುಲುಗಮ್ಮ, ಎಂ.ಎಸ್.ಸುAಕಪ್ಪ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸ್ವಯಂ-ಸೇವಕರು, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST