LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಚಿತ್ರದುರ್ಗದಲ್ಲಿ ಭಾನುವಾರ ವಿಜಯೋತ್ಸವ : ಮಾಜಿ ಸಚಿವ ಎಚ್.ಆಂಜನೇಯ

 ಚಿತ್ರದುರ್ಗ : ಒಳಮೀಸಲಾತಿ ಹೋರಾಟವು ಆಗಸ್ಟ್ 19ರಂದು ಫಲ ನೀಡಿದ್ದು, ಈ ಕಾರಣಕ್ಕೆ ಆಗಸ್ಟ್ 24ರ ಭಾನುವಾರ ಬೆಳಗ್ಗೆ 10.30ಕ್ಕೆ ಚಿತ್ರದುರ್ಗ ನಗರದಲ್ಲಿ ಸಂಭ್ರಮೋತ್ಸವ ಹಾಗೂ ಕೃತಜ್ಞತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

 

ಒಳಮೀಸಲಾತಿ  ಕಲ್ಪನೆ ಹುಟ್ಟು ಹಾಕಿದ ಮಂದಕೃಷ್ಣ ಮಾದಿಗ ಅವರ ಹೋರಾಟದ ರಥವನ್ನು ರಾಜ್ಯದಲ್ಲಿ ಮುನ್ನಡೆಸಿದವರು. ಲಕ್ಷಾಂತರ ಮಂದಿ ಮಾದಿಗರು, ರಾಜಕಾರಣಿಗಳು, ನೌಕರರು, ವಿದ್ಯಾರ್ಥಿಗಳು. ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ದಸಂಸ ಸೇರಿ ನೂರಾರು ಸಂಘಟನೆಗಳು ಸುದೀರ್ಘ 35 ವರ್ಷ ಹೋರಾಟದ ಹಾದಿ ಸವಿಸಿವೆ.

 

ಜೊತೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅನೇಕರು ಒಳಮೀಸಲಾತಿ ಏಕೆ ಬೇಕೆಂದು ಸಮರ್ಥವಾಗಿ ವಾದ ಮಂಡಿಸಲು ಬೆನ್ನಿಗೆ ನಿಂತಿದ್ದಾರೆ. ಮುಖ್ಯವಾಗಿ ಒಳಮೀಸಲಾತಿ ಜಾರಿಗೆ ಇದ್ದ ಅಡೆತಡೆಗಳನ್ನು ಮೆಟ್ಟಿ ನಿಂತು ಸಾಮಾಜಿಕ ನ್ಯಾಯದ ಹರಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಜಾರಿಗೊಳಿಸಿದ್ದಾರೆ. ಮಾದಿಗ ಸಮುದಾಯಕ್ಕೆ ಶೇ.6 ಮೀಸಲಾತಿ ನೀಡಿ ನುಡಿದಂತೆ ನಡೆದಿದ್ದಾರೆ. ಆದ್ದರಿಂದ ಸುದೀರ್ಘ 35 ವರ್ಷಗಳ ಕಾಲದ ಹೋರಾಟದ ಹಾದಿಯಲ್ಲಿ ಹೆಜ್ಹೆ ಹಾಕಿದವರನ್ನು ಸ್ಮರಿಸುವುದು ಹಾಗೂ ಒಳಮೀಸಲಾತಿ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಬೇಕಾಗಿದೆ. ಜೊತೆಗೆ ನಾವೆಲ್ಲರೂ ಒಂದೇಡೆ ಸೇರಿ ಸಂಭ್ರಮಿಸಿ, ವಿಜಯೋತ್ಸವ ಆಚರಿಸಬೇಕಾಗಿದೆ.



ಆದ್ದರಿಂದ ಆಗಸ್ಟ್ 24 ಭಾನುವಾರ ಬೆಳಗ್ಗೆ 10.30ಕ್ಕೆ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಸಂಭ್ರಮಾಚಾರಣೆ, ವಿಜಯೋತ್ಸವ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲಿಂದಲೇ ಕೃತಜ್ಞತೆ ಸಲ್ಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಕಾಗಿದೆ.

ಅಂದು ಹೆಚ್ಚಿನ ಸಂಖ್ಯೆಯಲ್ಲಿ ಮಾದಿಗ ಸಮುದಾಯದವರು ಹಾಗೂ ಒಳ ಮೀಸಲಾತಿಗಾಗಿ ಹೋರಾಟದೊಂದಿಗೆ ಹೆಜ್ಜೆ ಹಾಕಿದವರು, ಸಮುದಾಯದ ಮುಖಂಡರು, ರಾಜಕಾರಣಿಗಳು ಹಾಗೂ ಒಳಮೀಸಲಾತಿ ಪರವಿದ್ದ ಸಹೋದರ ಸಮಾಜದ ಮುಖಂಡರು ಸೇರಿ ಎಲ್ಲ ವರ್ಗದವರು ಪಾಲ್ಗೊಳ್ಳುವಂತೆ ಮಾಜಿ ಸಚಿವ ಎಚ್.ಆಂಜನೇಯ ವಿನಂತಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ