ಯೋಗಗುರು ಡಾ. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವೈದ್ಯರು, ನರ್ಸ್ಗಳು ಮತ್ತು ಸಿಬ್ಬಂದಿ ವರ್ಗ ಯೋಗ ಅಭ್ಯಾಸದಲ್ಲಿ ಭಾಗವಹಿಸಿದರು.

ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಎಲ್ಲಾ ವಿಭಾಗಗಳ ಸಿಬ್ಬಂದಿಯೊAದಿಗೆ ಯೋಗದಲ್ಲಿ ಭಾಗವಹಿಸಿ ಮಾತನಾಡಿ, ದೈನಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ಪ್ರಚಾರ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಯೋಗ ಕೇವಲ ವ್ಯಾಯಾಮವಲ್ಲ; ಇದು ಮನಸ್ಸು, ದೇಹ ಹಾಗೂ ಆತ್ಮದ ಸಮನ್ವಯವಾಗಿರುವ ದಾರಿಯಾಗಿದೆ. ಮೆಡಿಕವರ್ ಆಸ್ಪತ್ರೆ ಸಮಗ್ರ ಆರೋಗ್ಯ ಸೇವೆಗೆ ಬದ್ಧವಾಗಿರುವುದನ್ನು ಪ್ರತಿಬಿಂಬಿಸುತ್ತದೆ ಎಂದರು.
ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ಯೋಗದಲ್ಲಿ ಭಾಗವಹಿಸಿ, ಶಾಂತಿಯುತ ವಾತಾವರಣವನ್ನು ಸೃಷ್ಟಿಸಿ ಸಮೂಹ ಮನೋಭಾವವನ್ನು ಮೆರೆದರು.