LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಲಿಂಗಾಯತ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಯಿಸಿ - ಕೆ.ಎಂ.ಮಹೇಶ್ವರಸ್ವಾಮಿ

ಬಳ್ಳಾರಿ: ಧರ್ಮದ ಕಾಲಂನಲ್ಲಿ ಕಡ್ಡಾಯವಾಗಿ ಹಿಂದೂ ಎಂದು, ಜಾತಿ ಹಾಗೂ ಉಪ ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಅಥವಾ ಇನ್ಯಾವುದೇ ಬರೆಸುವಂತೆ ಕೆ.ಎಂ.ಮಹೇಶ್ವರಸ್ವಾಮಿ ತಿಳಿಸಿದರು.

 

ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ಹಿಂದೂ ಧರ್ಮವನ್ನು ಒಡೆಯುವ ಹುನ್ನಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ. ೪೮ ಜಾತಿಗಳಲ್ಲಿ ಕ್ರೈಸ್ತ ಎಂದು ನಮೂದಿಸುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ. ಉದಾಹರಣೆಗೆ ಲಿಂಗಾಯತ ಕ್ರಿಶ್ಚಿಯನ್,  ಮರಾಠಾ ಕ್ರಿಶ್ಚಿಯನ್, ಲಂಬಾಣಿ ಕ್ರಿಶ್ಚಿಯನ್ ಇತ್ಯಾದಿ ಎಂದು ನಮೂದಿಸಿ ಸಂವಿಧಾನ ತಿರಿಚುವ ಕೆಲಸ ಮಾಡುತ್ತಿದ್ದಾರೆ ಎಂದರು.

 

ರಾಜ್ಯ ಸರ್ಕಾರ ಕೇವಲ ಹಿಂದು ಧರ್ಮವನ್ನು ಒಡೆಯಲೆಂದೇ ಈ ರೀತಿ ಸಮಿಕ್ಷೆ ಮಾಡುತ್ತಿದೆ. ಜನವರಿಯಲ್ಲಿ ಕೇಂದ್ರ ಸರ್ಕಾರ ಜಾತಿ ಜನಗಣತಿ ಮಾಡಲಿದೆ. ರಾಜ್ಯ ಸರ್ಕಾರದಿಂದ ಈ ಜಾತಿ ಜನಗಣತಿ ಅಗತ್ಯವಿರಲಿಲ್ಲ. ೨೬ ಅಕ್ಟೋಬರ್ ೧೯೬೭ ರಂದು ನಡೆದಾಡುವ ದೇವರೆಂದೇ ಖ್ಯಾತಿ ಗಳಿಸಿದ್ದ ತುಮಕೂರಿನ ಸಿದ್ಧಗಂಗಾ ಮಠದ ಪೂಜ್ಯ ಡಾ. ಶಿವಕುಮಾರ ಮಹಾಸ್ವಾಮಿಗಳು ಆ ಸಮಯದಲ್ಲಿ ಹೇಳಿದಂತೆ ಈ ದೇಶ ಉಳಿಯಬೇಕಾದರೆ ಹಿಂದೂ ಸಂಸ್ಕೃತಿ ಉಳಿಯಬೇಕು, ಹಿಂದುಗಳಾಗಿ ಬದುಕಬೇಕು. ಇಲ್ಲವಾದಲ್ಲಿ ದೇಶ ಸರ್ವನಾಶವಾಗುತ್ತದೆ ಎಂದು ಹೇಳಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯನವರು ದೇಶವನ್ನು ಒಡೆಯಲಿಕ್ಕೆಂದೆ ಪ್ರತ್ಯೇಕ ಜಾತಿ ಸಮೀಕ್ಷೆ ಮಾಡುತ್ತಿದ್ದಾರೆ. ಹಾಗಾಗಿ ಎಲ್ಲ ಹಿಂದೂ ಧರ್ಮೀಯರು ಒಕ್ಕಟ್ಟಾಗಬೇಕು. ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಕೇವಲ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಜಾತಿ ಕಾಲದಲ್ಲಿ ವೀರಶೈವ ಲಿಂಗಾಯತ ಹಾಗೂ ಇತರೆ ಒಳಪಂಗಡಗಳೆಂದು ನಮೂದಿಸಬೇಕು ಎಂದು ಹೇಳಿದರು.



ತುಂಗಭದ್ರಾ ರೈತ ಸಂಘದ ಅಧ್ಯಕ್ಷರಾದ ಡಾ.ಡಿ.ಜಿ.ಪುರುಷೋತ್ತಮಗೌಡ, ಮುಖಂಡರಾದ ಗೋನಾಳ್ ರಾಜಶೇಖರ್ ಗೌಡ, ಪಂಪಾಪತಿ ಪ್ರಭುಸ್ವಾಮಿ, ಸಿ.ಎಂ.ಗುರುಬಸವರಾಜ್, ಪಿ ಎಸ್.ಸೋಮಲಿಂಗನಗೌಡ ಸೇರಿದಂತೆ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ