LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗೇಶ್ ಬಾಬು ಅವರ ಕಾರ್ಯ ವೈಖರಿ ಅನುಕರಣೀಯ

ನಾಯಕನಹಟ್ಟಿ : ದ್ರಾಕ್ಷಿ ವೈನ್ ನಿಗಮ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು ಮೊಳಕಾಲ್ಮೂರು ಕ್ಷೇತ್ರದಲ್ಲಿ 15 ವರ್ಷಗಳ ಕಾಲ ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಿಕೊಳ್ಳುತ್ತ ಬಂದಿದ್ದಾರೆ ಎಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಹೊಸಹಳ್ಳಿ ತಿಪ್ಪೇಸ್ವಾಮಿ ಹೇಳಿದರು.

ಪಟ್ಟಣದ ಸುದ್ದಿಗಾರರೊಂದಿಗೆ ಪ್ರತಿಯೊಂದು ಹಳ್ಳಿಗಳಿಗೂ ಸರ್ಕಾರದ ಸೌಲತ್ತುಗಳನ್ನು ತಲುಪಿಸಲು ಮನೆಮನೆಗೆ ತಿಳಿಸುತ್ತ ಬಂದಿದ್ದಾರೆ. ಈ ಕ್ಷೇತ್ರಕ್ಕೆ ಮಾದರಿಯಾಗಿದ್ದಾರೆ ಎಂದರು.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದ ಪ್ರದೇಶ ಎಂದು ಅಣೆಪಟ್ಟಿ ಕಟ್ಟಿಕೊಂಡಿದ್ದು, ಆದರೆ ಬಿಜಿಕೆರೆ ಗ್ರಾಮದ ಡಾ.ಬಿ.ಯೋಗೇಶ್ ಬಾಬು ಉತ್ತಮ ಆಡಳಿತಗಾರ ಹಾಗೂ ಉತ್ತಮ ಸ್ಥಾನಮಾನಗಳನ್ನು ಪಡೆದು ಇನ್ನೂ ಹೆಚ್ಚಿನ ಕೀರ್ತಿ ತರಲಿ ಎಂದು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಶಿಸ್ತಿನ ಸಿಪಾಯಿ ಕೂಡ ಆಗಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು ರಾಜ್ಯ ಸರ್ಕಾರ ಸಚಿವ ಸ್ಥಾನಮಾನ ನೀಡಿದ ಹಿನ್ನಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಬಂದಿದ್ದಾರೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಸಕ್ರಿಯವಾಗಿ ಶ್ರಮಿಸಿದ್ದಾರೆ. ಹಲವು ಬಾರಿ ಜಾತಿಬೇದವನ್ನು ಮರೆತು ಮಾದಿಗರ ಮನೆಗಳಲ್ಲಿ ಊಟ ಸವಿದಿದ್ದಾರೆ. ಅಂತಹ ಡಾ.ಬಿ.ಯೋಗೇಶ್ ಬಾಬು ಸರಳ ಸಜ್ಜನಿಕೆ ವ್ಯಕ್ತಿ ಕೂಡ ಆಗಿದ್ದಾರೆ. ಈ ಕ್ಷೇತ್ರಕ್ಕೆ ಆಧಾರ ಸ್ತಂಭ ಇದ್ದಂತೆ ಎಂದು ಅವರನ್ನು ಕೊಂಡಾಡಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST